Kukke Subrahmanya ಕಿರುಷಷ್ಠಿ ರಥೋತ್ಸವ

ದಕ್ಷಿಣ ಕನ್ನಡದ ಕುಕ್ಕೆ ಶ್ರೀ ಕುಕ್ಕೆ ಕ್ಷೇತ್ರದಲ್ಲಿ ಪ್ರತೀ ವರ್ಷ ಕಿರುಷಷ್ಠಿ ರಥೋತ್ಸವವನ್ನು ಆಚರಿಸಲಾಗುತ್ತದೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಡಿ.28ರಂದು ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು

ಸಹಸ್ರಾರು ಸಂಖ್ಯೆಯ ಭಕ್ತರ ಉಪ ಸ್ಥಿತಿಯಲ್ಲಿ ಶ್ರೀ ದೇವರ ಉತ್ಸವ ಜರಗಿತು

ಆ ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟಿಯಲ್ಲಿ ದೇವರಿಗೆ ಪೂಜೆ ನೆರವೇರಿತು

ಈ ಸಂದರ್ಭದಲ್ಲಿ ಆಕರ್ಷಕ ಸುಡುಮದ್ದು ಪ್ರದರ್ಶನವಿತ್ತು

ಹೊರಾಂಗಣದಲ್ಲಿ ಪಲ್ಲಕ್ಕಿ ಉತ್ಸವ, ಬಂಡಿ ಉತ್ಸವ, ಸಂಗೀತ ವಾದ್ಯಗಳ ಉತ್ಸವ ನಡೆಯಿತು

ಕೇರಳ ಶೈಲಿಯ ಚೆಂಡೆ ವಾದನ ಕೂಡಾ ನಡೆಯಿತು

ಅದೇ ದಿನದಂದು ಎಡೆಸ್ನಾನ ಸೇವೆ ನೆರವೇರಿಸಿದರು

ಕಿರುಷಷ್ಠಿ ಮಹೋತ್ಸವದ ಅಂಗವಾಗಿ 53 ಭಕ್ತರು ಸ್ವಯಂ ಪ್ರೇರಿತರಾಗಿ ಎಡೆಸ್ನಾನ ಸೇವೆ ನೆರವೇರಿಸಿದರು