ಬಾಳೆ ದಿಂಡಿನಿಂದ Floor Mat ತಯಾರಿಸಬಹುದಂತೆ

ಚಾಮರಾಜನಗರದ ಮಹಿಳೆಯೊಬ್ಬರು ಕಸದಿಂದ ರಸ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ

ರೈತರು ಬಾಳೆಗೊನೆ ಕೊಯ್ದ ನಂತರ ಬೀಸಾಡುವ ಅನುಪಯುಕ್ತ ಬಾಳೆ ದಿಂಡಿನಿಂದ ಮ್ಯಾಟ್, ಫ್ಲೋರ್ ಮ್ಯಾಟ್, ಚಾಪೆ, ಬ್ಯಾಗ್, ಪರ್ಸ್, ಉಪ್ಪಿನಕಾಯಿ ಇತ್ಯಾದಿ ಪರಿಸರಸ್ನೇಹಿ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ

ಚಾಮರಾಜನಗರದ ಗುಂಡ್ಲುಪೇಟೆ ತಾಲೋಕಿನ ಆಲಹಳ್ಳಿಯ ವರ್ಷಾ ಎಂ.ಟೆಕ್ ಪದವೀಧರೆಯಾದರೂ ಯಾವುದೇ ಉದ್ಯೋಗಕ್ಕೆ ಸೇರಿರಲಿಲ್ಲ

ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲ ಹೊಂದಿದ್ದ ಅವರಿಗೆ ಬೇರೆಯವರ ಕೈ ಕೆಳಗೆ ಕೆಲಸ ಮಾಡಲು ಇಷ್ಟ ಇರಲಿಲ್ಲ

ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ಬಳಿ ಜಮೀನಿನಲ್ಲಿ ವರ್ಚಾ ಅವರು ಬಾಳೆ ಬೆಳೆದಿದ್ದರು

ಬಾಳೆ ದಿಂಡನ್ನು ವಿಲೇವಾರಿ ಮಾಡುವುದು ಹೇಗೆ ಎಂಬುದರ ಬಗ್ಗೆ ಯೂಟ್ಯೂಬ್​ನಲ್ಲಿ ಸರ್ಚ್ ಮಾಡುತ್ತಿದ್ದಾಗ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಳೆದಿಂಡಿನಿಂದ ಹಲವು ರೀತಿಯ ಉತ್ಪನ್ನಗಳ ತಯಾರಿಕೆ ಮಾಡುತ್ತಿರುವ ದೃಶ್ಯಾವಳಿ ನೋಡಿದ್ದಾರೆ

ತಾವೂ ಸಹ ಈ ಉದ್ಯಮವನ್ನೇ ಏಕೆ ಆರಂಭಿಸಬಾರದು ಎಂದುಕೊಂಡ ವರ್ಷಾ ಅಗತ್ಯ ಯಂತ್ರೋಪಕರಣಗಳನ್ನ ಖರೀದಿಸಿದರು

ಚೂರೂ ತಡಮಾಡದೇ ಉಮ್ಮತ್ತೂರಿನಲ್ಲಿರುವ ತಮ್ಮ ಜಮೀನಿನಲ್ಲಿ ಬಾಳೆ ದಿಂಡು ಉತ್ಪನ್ನಗಳ ತಯಾರಿಕಾ ಉದ್ಯಮ ಆರಂಭಿಸಿಯೇಬಿಟ್ರು

ಇದರ ಫಲವಾಗಿ ಬಾಳೆ ದಿಂಡಿನಿಂದ ಮ್ಯಾಟ್, ಫ್ಲೋರ್ ಮ್ಯಾಟ್, ಚಾಪೆ, ಬ್ಯಾಗ್, ಪರ್ಸ್, ಉಪ್ಪಿನಕಾಯಿಯನ್ನು ತಯಾರಿಸುತ್ತಾ,ಕಸದಿಂದ ರಸ ತೆಗೆಯುವುದರಲ್ಲಿ ಯಶಸ್ವಿಯಾಗಿದ್ದಾರೆ