SSC Exam ಅನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಸರ್ಕಾರ.
ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಕನ್ನಡದಲ್ಲಿಯೂ ಅವಕಾಶ ನೀಡಬೇಕು ಎಂಬ ಬೇಡಿಕೆ ಇಡಲಾಗಿತ್ತು.
ಹಾಗಾಗಿ ಈಗ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) 2023ರ ಏಪ್ರಿಲ್ನಲ್ಲಿ ನಡೆಸುವ 11,400 ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಗಳನ್ನು ಬರೆಯಬಹುದು
ಈ ನಿಟ್ಟಿನಲ್ಲಿ ಕನ್ನಡಿಗರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ.
ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತು ಅಂಕಗಳಿಸಲು ಸಹ ಇದು ತುಂಬಾ ಸಹಾಯಕವಾಗಿದೆ.
ಈ ಆದೇಶದ ಪ್ರಕಾರ ಎಸ್ಎಸ್ಸಿ ನಡೆಸುವ 10,880 ಎಟಿಎಸ್ ಹುದ್ದೆ ಮತ್ತು ಎಲ್ಲಾ ಪರೀಕ್ಷೆಗಳನ್ನು ಅಭ್ಯರ್ಥಿಗಳು ಕನ್ನಡದಲ್ಲಿ ಬರೆಯಬಹುದಾಗಿದೆ.
ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಈ ರೀತಿ ಅವಕಾಶ ನೀಡಿದೆ.
ಅದ್ದರಿಂದ ಹೆಚ್ಚಿನ ಜನ ಪರೀಕ್ಷೆಯಲ್ಲಿ ಪಾಸ್ ಆಗುವ ನಿರೀಕ್ಷೆ ಇದೆ.