ಕರ್ನಾಟಕ Weather ಮಹತ್ವದ ಮಾಹಿತಿ
ದೇಶದಲ್ಲೇ ಅತಿ ಹೆಚ್ಚು ಉಷ್ಣಾಂಶ ಕರ್ನಾಟಕದ ಈ ಊರಲ್ಲಿ ದಾಖಲು
ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ.
ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ.
ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಪ್ರತಿವರ್ಷದ ತಾಪಮಾನಕ್ಕಿಂತ 5.4 ಡಿಗ್ರಿ ಸೆಲ್ಸಿಯಸ್ ಹೆಚ್ಚಿತ್ತು.
ಕರಾವಳಿಯ ಜನತೆ ಸೂಕ್ತ ಮುನ್ನಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕಿದೆ.