ಬಾವಿಗಿಳಿದು ಚಿರತೆ ರಕ್ಷಿಸಿದ್ರು ಯುವ ವೈದ್ಯೆ

ದಕ್ಷಿಣ ಕನ್ನಡದ ಮೂಡುಬಿದಿರೆಯ ನಿಡ್ಡೋಡಿ ಎಂಬಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿತ್ತು

ಎರಡು ದಿನಗಳಿಂದ ಅರಣ್ಯ ಇಲಾಖೆ ಎಷ್ಟೇ ಹರಸಾಹಸ ಮಾಡಿದ್ರೂ ಚಿರತೆ ಮರಿಯನ್ನು ಬಾವಿಯನ್ನ ಮೇಲೆತ್ತೋಕೆ ಆಗಿರ್ಲೇ ಇಲ್ಲ

30 ಅಡಿಗಿಂತ ಆಳದ ಈ ಬಾವಿಯ ಒಳಗೆ ಗುಹೆಯಂತಹ ಜಾಗದಲ್ಲಿ ಈ ಚಿರತೆ ಮರಿ ಅಡಗಿಕೊಳ್ಳುತ್ತಿತ್ತು

ಇಳಿಸಿದ ಬೋನಿನೊಳಗೂ ಬರಲು ಹಿಂದೇಟು ಹಾಕುತ್ತಿತ್ತು

ಆಗ ಅರಣ್ಯ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಸ್ವಯಂಸೇವಾ ಸಂಸ್ಥೆ ‘ಚಿಟ್ಟೆ ಪಿಲಿ ವೈಲ್ಡ್ ಲೈಫ್ ರೆಸ್ಕ್ಯೂ ಸೆಂಟರ್​'ನ ತಜ್ಞ ವೈದ್ಯರು ಸ್ಥಳಕ್ಕಾಗಮಿಸಿದರು

ಸಂರಕ್ಷಣ ತಂಡದ ಡಾ. ಮೇಘನಾ ಪೆಮ್ಮಯ್ಯ ಅವರು ಅರಿವಳಿಕೆ ಮದ್ದು ತುಂಬಿದ ಡಾರ್ಟ್ ಗನ್ ಹಿಡಿದುಕೊಂಡು ಬೋನಿನೊಳಗೆ ಕುಳಿತರು

ಅರಣ್ಯ ಇಲಾಖೆಯ ಸಿಬಂದಿಗಳು, ಊರವರು ಸೇರಿಕೊಂಡು ಅವರನ್ನು ಬಾವಿಗಿಳಿಸಿದ್ರು

ಹೀಗೆ ಬಾವಿಯೊಳಗೆ ಇಳಿದ ಡಾ. ಮೇಘನಾ ಅವರು ಗುಹೆಯೊಳಗೆ ಕುಳಿತ ಚಿರತೆ ಮರಿಯತ್ತ ಗುರಿಯಿಟ್ಟು ಅರಿವಳಿಕೆ ಚುಚ್ಚುಮದ್ದನ್ನು ಪ್ರಯೋಗಿಸಿದರು

ಚಿರತೆ ಪ್ರಜ್ಞೆ ತಪ್ಪಿದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಹಗ್ಗದ ಮೂಲಕ ಕೆಳಗಿಳಿದು ಹೆಣ್ಣು ಚಿರತೆ ಮರಿಯೊಂದಿಗೆ ಹೆಣ್ಣು ಜೀವ ಡಾ. ಮೇಘನಾ ಬಾವಿಯಿಂದ ಮೇಲಕ್ಕೆ ಬಂದರು